ಮಾಜಿ ಮುಖ್ಯಮಂತ್ರಿಗಳ ಕುಟುಂಬ ರಾಜಕಾರಣದಿಂದಾಗಿ ಸದಾ ಗಮನ ಸೆಳೆಯೋ ಕ್ಷೇತ್ರ ಶಿವಮೊಗ್ಗ ಲೋಕಸಭಾ ಕ್ಷೇತ್ರ. ಈ ಬಾರಿ ಈ ಲೋಕಸಭಾ ಕ್ಷೇತ್ರ ಬಿ. ಎಸ್. ಯಡಿಯೂರಪ್ಪ ವರ್ಸಸ್ ಕೆ. ಎಸ್. ಈಶ್ವರಪ್ಪ ಅನ್ನೋ ಕಾರಣದಿಂದಾಗಿ ಹೈವೋಲ್ಟೇಜ್ ಕಣವಾಗಿ ಮಾರ್ಪಟ್ಟಿದೆ. ಸಮಾಜವಾದಿ ಸಿದ್ದಾಂಥದ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಪಾರುಪತ್ಯವನ್ನ ಸಾಧಿಸಿತ್ತು. ಆದರೆ ಕಳೆದ ಎರಡು ದಶಕಗಳಿಂದ ಇದು ಬಿಜೆಪಿ ಭದ್ರಕೋಟೆ ಅನ್ನಿಸಿಕೊಂಡಿದೆ.
ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ ಗ್ರಾಮಾಂತರ, ಭದ್ರಾವತಿ, ಶಿವಮೊಗ್ಗ, ತೀರ್ಥಹಳ್ಳಿ, ಶಿಕಾರಿಪುರ, ಸೊರಬ, ಸಾಗರ ವಿಧಾನಸಭಾ ಕ್ಷೇತ್ರಗಳ ಜೊತೆ ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರ ಈ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಸೇರುತ್ತವೆ. ಈ ಪೈಕಿ ನಾಲ್ಕರಲ್ಲಿ ಬಿಜೆಪಿ ಮೂರರಲ್ಲಿ ಕಾಂಗ್ರೆಸ್ ಹಾಗೇ ಒಂದರಲ್ಲಿ ಜೆಡಿಎಸ್ ಶಾಸಕರಿದ್ದಾರೆ. ಮೇಲ್ನೊಟಕ್ಕೆ ಶಿವಮೊಗ್ಗದಲ್ಲಿ ಜೆಡಿಎಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ ಅನ್ನಿಸಿದ್ರೂ ಕೂಡಾ ಶಿವಮೊಗ್ಗ ಗ್ರಾಮಾಂತರ, ತೀರ್ಥಹಳ್ಳಿ, ಭಧ್ರಾವತಿಗಳಲ್ಲಿ ಗಣನೀಯ ಪ್ರಮಾಣದಲ್ಲಿ ಮತವನ್ನ ಜೆಡಿಎಸ್ ಹೊಂದಿದೆ. ಹೀಗಾಗಿ ಈ ಬಾರಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಾಗಿರೋದು ಬಿವೈ ರಾಘವೇಂದ್ರಗೆ ಪ್ಲಸ್ ಪಾಯಿಂಟ್..
ಆದರೆ ಈ ಬಾರಿ ಯಡಿಯೂರಪ್ಪನವ್ರ ಮಗನ ವಿರುದ್ಧ ಬಿಜೆಪಿಯ ಹಿರಿಯ ನಾಯಕ ಈಶ್ವರಪ್ಪ ತೊಡೆತಟ್ಟಿದ್ದಾರೆ. ತಮ್ಮ ಮಗ ಕಾಂತೇಶ್ಗೆ ಹಾವೇರಿಯಲ್ಲಿ ಟಿಕೆಟ್ ಕೊಡಿಸ್ತೀನಿ ಅಂತ ಹೇಳಿದ್ದ ಯಡಿಯೂರಪ್ಪ, ತಮಗೆ ಮೋಸ ಮಾಡಿದ್ರೆ ಅಂತ ಹೇಳಿ ಈಶ್ವರಪ್ಪ ಈ ನಿರ್ಧಾರಕ್ಕೆ ಬಂದಿದ್ದಾರೆ. ಇನ್ನು ಕಾಂಗ್ರೆಸ್ ಕೂಡಾ ಮಾಜಿ ಸಿಎಂ ಸಾರೆಕೊಪ್ಪ ಬಂಗಾರಪ್ಪ ಪುತ್ರಿ, ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರಿಗೆ ಟಿಕೆಟ್ ನೀಡಿದೆ.
ಪ್ರಸ್ತುತ ಶಿವಮೊಗ್ಗ ಲೋಕಸಭಾ ಕ್ಷೇತ್ರದ ರಾಜಕೀಯ ಚಿತ್ರಣ ಹೇಗಿದೆ? ಇಲ್ಲಿ ರಾಜಕೀಯ ಲೆಕ್ಕಾಚಾರಗಳು ಏನು ಹೇಳುತ್ವೆ ಅನ್ನೋ ಮಾಹಿತಿಗಾಗಿ ಈ ಲಿಂಕಿಗೆ ಭೇಟಿ ನೀಡಿ.
ಶಿವಮೊಗ್ಗ ಲೋಕಸಭಾ ಕ್ಷೇತ್ರ: ಮಾಜಿ ಸಿಎಂ ಮಕ್ಕಳಿಗೆ ಈಶ್ವರಪ್ಪ ಸವಾಲು..? ತ್ರಿಕೋನ ಸ್ಪರ್ಧೆಯಲ್ಲಿ ಗೆಲ್ಲೋರ್ಯಾರು..?

What’s your reaction?
Love0
Sad0
Happy0
Sleepy0
Angry0
Dead0
Wink0




Leave a Reply