ಬಾಗಲಕೋಟೆ ಲೋಕಸಭಾ ಕ್ಷೇತ್ರ: ಗದ್ದಿಗೌಡರ್ ವಿರುದ್ಧ ಶಿವಾನಂದ ಪಾಟೀಲ್ ಪುತ್ರಿ ಕಣಕ್ಕೆ..!

ಬಿಜೆಪಿ ತೆಕ್ಕೆಯಲ್ಲಿರುವ ಮತ್ತೊಂದು ಲೋಕಸಭಾ ಕ್ಷೇತ್ರ ಬಾಗಲಕೋಟೆ. ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳನ್ನ ನೀಡಿದ ಹಾಗೂ 4 ಸಿಎಂಗಳಿಗೆ ರಾಜಕೀಯ ನೆಲೆ ಕಲ್ಪಿಸಿದ ಹೆಗ್ಗಳಿಕೆ ಬಾಗಲಕೋಟೆ ಜಿಲ್ಲೆಗಿದೆ. ಮೊದಲೆನೆಯದ್ದಾಗಿ ಎಸ್. ನಿಜಲಿಂಗಪ್ಪ ಅವರು ಇಲ್ಲಿಂದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದು, ಮುಖ್ಯಮಂತ್ರಿ ಕೂಡಾ ಆಗಿದ್ದರು. ಅವರ ಬಳಿಕ ವೀರೇಂದ್ರ ಪಾಟೀಲ್ ಅವರು 1980ರಲ್ಲಿ ಸ್ವಕ್ಷೇತ್ರ ಕಲಬುರಗಿ ಬಿಟ್ಟು ಬಾಗಲಕೋಟೆಯಲ್ಲಿ ಸ್ಪರ್ಧಿಸಿ ಲೋಕಸಭೆಗೆ ಆಯ್ಕೆಯಾಗಿದ್ದರು. ಇದಾದ ನಂತರ ಕಣಕ್ಕೆ ಇಳಿದವರು ರಾಮಕೃಷ್ಣ ಹೆಗಡೆ. ಇಲ್ಲಿನ ಕೆಲವು ಆತ್ಮೀಯರ ಮಾತಿಗೆ ಕಟ್ಟು ಬಿದ್ದು ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ, ಸಿದ್ದು ನ್ಯಾಮಗೌಡ ವಿರುದ್ಧ ಸೋತಿದ್ದರು. ಇವರಾದ ಬಳಿಕ ಸಿಎಂ ಸಿದ್ದರಾಮಯ್ಯ ಅವರು 2018ರ ವಿಧಾನಸಭಾ ಚುನಾವಣೆಯಲ್ಲಿ ಎರಡನೇ ಕ್ಷೇತ್ರವಾಗಿ ಬಾದಾಮಿಯಿಂದ ಸ್ಪರ್ಧಿಸಿ, ರಾಜಕೀಯವಾಗಿ ಮರುಜನ್ಮ ಪಡೆದರು. ಇಂತಹ ಬಾಗಲಕೋಟೆ ಈಗ ಲೋಕಸಭಾ ಚುನಾವಣೆಗೆ ಸಜ್ಜಾಗಿದೆ.

ಈ ಬಾರಿ ಲೋಕಸಭಾ ಚುನಾವಣೆಗೆ ಕಳೆದ 4 ಬಾರಿ ನಿರಂತರವಾಗಿ ಆಯ್ಕೆಯಾಗಿರೋ ಪಿ.ಸಿ. ಗದ್ದಿಗೌಡರ ಅವ್ರಿಗೆ ಬಿಜೆಪಿ ಟಿಕೆಟ್ ಘೋಷಿಸಿದೆ. ಇತ್ತ ಗದ್ದಿಗೌಡರ ವಿರುದ್ಧ ಕಾಂಗ್ರೆಸ್ ಅಳೆದು ತೂಗಿ, ಕಾಶಪ್ಪನವರ್ ಅವ್ರ ಪತ್ನಿ ವೀಣಾ ಕಾಶಪ್ಪನವರ್ಗೆ ಟಿಕೆಟ್ ತಪ್ಪಿಸಿ, ಸಚಿವ ಶಿವಾನಂದ್ ಪಾಟೀಲ್ ಅವ್ರ ಮಗಳು ಸಂಯುಕ್ತ ಪಾಟೀಲರಿಗೆ ಟಿಕೆಟ್ ನ ಕೊಟ್ಟಿದೆ. ಈ ಮೂಲಕ ಅನುಭವಿ ಹಾಗೂ ಯುವ ನಾಯಕರ ನಡುವೆ ಈ ಚುನಾವಣೆ ನಡೆಯಲಿದೆ.
ಬಾಗಲಕೋಟೆ ಲೋಕಸಭಾ ಕ್ಷೇತ್ರ ಕುರಿತಾದ ಹೆಚ್ಚಿನ ವಿವರಗಳಿಗಾಗಿ ಈ ಕೆಳಗಿನ ಲಿಂಕಿಗೆ ಭೇಟಿ ನೀಡಿ.